ADVERTISEMENT

ಹಲವೆಡೆ ಮಳೆ; ಕಟಾವು ಮುಂದೂಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 7:33 IST
Last Updated 9 ಡಿಸೆಂಬರ್ 2020, 7:33 IST

ಮೈಸೂರು: ಜಿಲ್ಲೆಯ ಹಲವೆಡೆ ಸೋಮವಾರ ರಾತ್ರಿ ಮತ್ತು ಮಂಗಳವಾರ ಮಳೆಯಾಗಿದ್ದು, ಬೆಳೆಗಳ ಕಟಾವನ್ನು ಮುಂದೂಡಬೇಕು ಎಂದು ಕೃಷಿ ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

ಪಿರಿಯಾಪಟ್ಟಣದಲ್ಲಿ ಸಾಧಾರಣ ಮಳೆಯಾಗಿದ್ದರೆ, ಎಚ್.ಡಿ.ಕೋಟೆ, ತಿ.ನರಸೀಪುರ, ಸಾಲಿಗ್ರಾಮ, ಬಿಳಿಕೆರೆ, ಜಯಪುರ, ತಿ.ನರಸೀಪುರ ಹಾಗೂ ನಂಜನಗೂಡು ತಾಲ್ಲೂಕಿನಲ್ಲಿ ಹಗುರ ಮಳೆಯಾಗಿದೆ.

‌ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇರುವುದರಿಂದ ರೈತರು ಭತ್ತ, ರಾಗಿ ಹಾಗೂ ಇತರೆ ಬೆಳೆಗಳ ಕಟಾವು ಕಾರ್ಯವನ್ನು ಮುಂದೂಡಬೇಕು ಎಂದು ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಪಿ.ಪ್ರಕಾಶ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.