ಮೈಸೂರು: ಉಡುಪಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಜಗತ್ತಿನ ಪಾತಕಿ ಬನ್ನಂಜೆ ರಾಜನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಮೈಸೂರಿಗೆ ಕರೆ ತಂದು ವಿಚಾರಣೆ ನಡೆಸಲಾಗಿದೆ.
‘ಉಡುಪಿ ಹಾಗೂ ಮಂಗಳೂರಿನಲ್ಲಿ ಬನ್ನಂಜೆ ರಾಜನಿಗೆ ಬೆದರಿಕೆ ಇದ್ದುದ್ದರಿಂದ ಇಲ್ಲಿಗೆ ಕರೆತರಲಾಯಿತು. ಮೊದಲಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಬಿಗಿ ಭದ್ರತೆ ನಡುವೆ ಶನಿವಾರ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಬಳಿಕ ಅಜ್ಞಾತಸ್ಥಳದಲ್ಲಿ ವಿಚಾರಣೆ ನಡೆಸಲಾಯಿತು’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.