ಮೈಸೂರು: ನಗರದ ಆಲನಳ್ಳಿಯ ಚಿತ್ಕಲ ಪ್ರತಿಷ್ಠಾನದ ಅಕ್ಕಮಹಾದೇವಿ ವಿದ್ಯಾರ್ಥಿ ನಿಲಯದಲ್ಲಿ ಶರಣ ಸಾಹಿತ್ಯ ಪರಿಷತ್ ನಗರ ಘಟಕದಿಂದ ಶನಿವಾರ ದತ್ತಿ ಕಾರ್ಯಕ್ರಮ ನಡೆಯಿತು.
ದತ್ತಿ ದಾನಿ ಎಂ.ಎ.ನೀಲಾಂಬಿಕ ಮಾತನಾಡಿ, ‘ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಕೊಡುಗೆ ಅಪಾರ. ಸಮಾಜಕ್ಕೆ ತಮ್ಮನ್ನು ತಾವು ಸಂಪೂರ್ಣವಾಗಿ ಅರ್ಪಿಸಿಕೊಂಡ ಮಹಾನುಭಾವ’ ಎಂದು ಹೇಳಿದರು.
‘ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಸತಿ, ಅನ್ನ ಹಾಗೂ ವಿದ್ಯಾಭ್ಯಾಸಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಿದ್ದರು. ಈ ಮೂಲಕ ಶೈಕ್ಷಣಿಕ ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಕಾರಣರಾಗಿದ್ದರು’ ಎಂದು ಸ್ಮರಿಸಿದರು.
ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಮ.ಗು.ಸದಾನಂದಯ್ಯ, ‘12ನೇ ಶತಮಾನದ ದಾಸೋಹದ ಪರಿಕಲ್ಪನೆಯನ್ನು ಈ ನಾಡಿಗೆ ತಿಳಿಸಿಕೊಟ್ಟರು. ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಅಧ್ಯಕ್ಷ ಎಂ.ಚಿನ್ನಸ್ವಾಮಿ, ಬರಡನಪುರ ಮಠದ ಪರಶಿವಮೂರ್ತಿ ಸ್ವಾಮೀಜಿ ಮಾತನಾಡಿದರು.
ಮುದ್ದು ಮಲ್ಲೇಶ, ಜಗದೀಶ್ ಬಿ ಚಿಕ್ಕಮಠ, ವಿದ್ಯಾರ್ಥಿ ನಿಲಯದ ಕಾರ್ಯದರ್ಶಿ ಮಹೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.