ADVERTISEMENT

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆ: ರಾಜೀವ್ ಸತತ 4ನೇ ಬಾರಿಗೆ ಅಧ್ಯಕ್ಷ

ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 12:50 IST
Last Updated 12 ಅಕ್ಟೋಬರ್ 2020, 12:50 IST
ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ–ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್‌.ವಿ.ರಾಜೀವ್ ಹಾಗೂ ಸದಾನಂದ ಅವರನ್ನು ಶಾಸಕ ಜಿ.ಟಿ.ದೇವೇಗೌಡ ಸೋಮವಾರ ಅಭಿನಂದಿಸಿದರು
ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ–ಉಪಾಧ್ಯಕ್ಷರಾಗಿ ಆಯ್ಕೆಯಾದ ಎಚ್‌.ವಿ.ರಾಜೀವ್ ಹಾಗೂ ಸದಾನಂದ ಅವರನ್ನು ಶಾಸಕ ಜಿ.ಟಿ.ದೇವೇಗೌಡ ಸೋಮವಾರ ಅಭಿನಂದಿಸಿದರು   

ಮೈಸೂರು: ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾಗಿ, ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್ ಸತತ ನಾಲ್ಕನೇ ಬಾರಿಗೆ ಆಯ್ಕೆಯಾದರು.

ಸೆಪ್ಟೆಂಬರ್‌ನಲ್ಲಿ ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್‌ಗೆ ನಿರ್ದೇಶಕರ ಆಯ್ಕೆ ನಡೆದಿತ್ತು. ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು.

ಜಿಲ್ಲಾ ಸಹಕಾರಿ ಕ್ಷೇತ್ರದ ಹಿರಿಯ ಮುಖಂಡ, ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ಸಾರಥ್ಯದಲ್ಲಿ ಯೂನಿಯನ್‌ನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ADVERTISEMENT

ಸಹಕಾರಿ ಯೂನಿಯನ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಎಚ್‌.ವಿ.ರಾಜೀವ್ ಅವರನ್ನು ಮುಂದಿನ ಐದು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಸದಾನಂದ ಸಹ ಅವಿರೋಧವಾಗಿ ಆಯ್ಕೆಯಾಗಿದ್ದು, ಯೂನಿಯನ್‌ನ ನಿರ್ದೇಶಕರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.