ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಲಾಯಿತು. ರಾಘವೇಂದ್ರ ಮೋಕ್ಷಗುಂಡಂ, ವಿಮಲಸಾಗರ್ ಸುರಿಜಿ, ವಿಜಯಾನಂದ ತೀರ್ಥ ಸ್ವಾಮೀಜಿ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡ್ಡೀಕೆರೆ ಗೋಪಾಲ್, ಅನು ಆರ್.ಅಮ್ಮ ಪಾಲ್ಗೊಂಡರು
ಮೈಸೂರು: ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆಯಿಂದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ವಿಭೂಷಣ ಪ್ರಶಸ್ತಿ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ‘ಸಾಧಕರನ್ನು ಪ್ರೋತ್ಸಾಹಿಸುವುದೂ ಒಂದು ಸಮಾಜ ಸೇವೆ. ನಾಲ್ವಡಿ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ’ ಎಂದರು.
ಒಟ್ಟು 48 ಮಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, 21 ಮಂದಿಗೆ ರಾಜ್ಯ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಅವಧೂತ ದತ್ತಪೀಠದ ವಿಜಯಾನಂದ ತೀರ್ಥ ಸ್ವಾಮೀಜಿ, ಗುರುದೇವ ಜೈನ್ ಸಮಾಜದ ವಿಮಲಸಾಗರ್ ಸುರಿಜಿ, ದೊಡ್ಡಬೆಲವಂಗಲದ ಅನು ಆರ್.ಅಮ್ಮ, ಕುಂದರಗಿಯ ಲಕ್ಷ್ಮಣ ಶರಣರು, ರಾಘವೇಂದ್ರ ಮೋಕ್ಷಗುಂಡಂ ಗುರೂಜಿ, ವೇದಿಕೆ ಸ್ಥಾಪಕ ಹುಸೇನಸಾಬ ಎಫ್.ಕೆರೂರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.