ADVERTISEMENT

ಮೈಸೂರು ತಾಲ್ಲೂಕು: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 17:43 IST
Last Updated 18 ಜೂನ್ 2019, 17:43 IST

ಮೈಸೂರು: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯೊಬ್ಬರ ಮೇಲೆ ಅದೇ ಗ್ರಾಮದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಕುರಿತು ಇಲ್ಲಿನ ಠಾಣೆಯೊಂದರಲ್ಲಿ ದೂರು ದಾಖಲಾಗಿದೆ.

ಮಹಿಳೆಯು ಸೋಮವಾರ ಬೆಳಿಗ್ಗೆ ಬಹಿರ್ದೆಸೆಗೆ ಹೋಗಿದ್ದಾಗ ಯುವಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಪ್ಪಿಸಿಕೊಂಡು ಬಂದ ಮಹಿಳೆಯು ಯುವಕನ ತಂದೆಗೆ ವಿಷಯ ತಿಳಿಸಿದ್ದಾರೆ. ಆದರೆ, ಅವರು ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಕೊನೆಗೆ ಮಹಿಳೆಯು ಮಂಗಳವಾರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT