ADVERTISEMENT

ವಾರಾಣಸಿಯಲ್ಲಿ ಅತ್ಯಾಚಾರ: ಮೈಸೂರಿನಲ್ಲಿ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 12:45 IST
Last Updated 10 ಏಪ್ರಿಲ್ 2025, 12:45 IST
ಮೈಸೂರಿನ ಹಳೇ ಡಿಸಿ ಕಚೇರಿ ಬಳಿ ಆರ್ಯನ್ ಅವರು ಮೌನ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಮೈಸೂರಿನ ಹಳೇ ಡಿಸಿ ಕಚೇರಿ ಬಳಿ ಆರ್ಯನ್ ಅವರು ಮೌನ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ   

ಮೈಸೂರು: ಉತ್ತರ ಪ್ರದೇಶದ ವಾರಾಣಸಿಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಗಂಧದಗುಡಿ ಫೌಂಡೇಷನ್‌ ಅಧ್ಯಕ್ಷ ಆರ್ಯನ್ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು.

‘ಯುವತಿಯನ್ನು ಅಪಹರಿಸಿ ಒಂದು ವಾರದಲ್ಲಿ 23 ಪುರುಷರು ಸಾಮೂಹಿಕವಾಗಿ ಅತ್ಯಾಚಾರವೆಸಗಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಸಂಬಂಧ ಏ.6ರಂದು ಲಾಲ್‌ಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT