ADVERTISEMENT

ನಂಜನಗೂಡು | ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯ: ಪೋಕ್ಸೊ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 16:09 IST
Last Updated 27 ಮಾರ್ಚ್ 2025, 16:09 IST
<div class="paragraphs"><p>ಲೈಂಗಿಕ ದೌರ್ಜನ್ಯ</p></div>

ಲೈಂಗಿಕ ದೌರ್ಜನ್ಯ

   

ನಂಜನಗೂಡು: ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಸ್ವಂತ ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದು, ವೈದ್ಯಕೀಯ ಪರೀಕ್ಷೆ ಸಂದರ್ಭ ಬಾಲಕಿ ಗರ್ಭಿಣಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಲ್ಲೂಕಿನ ಗ್ರಾಮೀಣ ಪ್ರದೇಶದ ಮಹಿಳೆಯೋರ್ವರು ಮಗಳನ್ನು ಓದಿಸುವ ಸಲುವಾಗಿ ನಗರದಲ್ಲಿ ವಾಸವಿದ್ದು, ಬಾಲಕಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆಯ ಚಿಕ್ಕಪ್ಪ ಎರಡು ತಿಂಗಳ ಹಿಂದೆ ಶಾಲೆಯಿಂದ ಊರಿಗೆ ಕರೆದೊಯ್ದಿದ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದಾನೆ ಎನ್ನಲಾಗಿದೆ.

ADVERTISEMENT

ಶಾಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಶಿಕ್ಷಕರು ಮಾಹಿತಿ ಪಡೆದುಕೊಳ್ಳುವ ಸಂದರ್ಭ ಎರಡು ತಿಂಗಳಿನಿಂದ ಆಕೆ ಮುಟ್ಟಾಗದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅನಂತರ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ವಿದ್ಯಾರ್ಥಿನಿ 6 ವಾರಗಳ ಗರ್ಭಿಣಿ ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಪೋಕ್ಸೊ ಕಾಯಿದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಮೈಸೂರಿನ ಬಾಲಮಂದಿರಕ್ಕೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.