ADVERTISEMENT

ಯೋಗ ಪಸರಿಸುವ ಗುರಿ: ರಾಮದಾಸ್

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 12:40 IST
Last Updated 29 ಜನವರಿ 2023, 12:40 IST
ರಥಸಪ್ತಮಿ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾನುವಾರ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಯೋಗಪಟುಗಳು ಪಾಲ್ಗೊಂಡಿದ್ದರು
ರಥಸಪ್ತಮಿ ಅಂಗವಾಗಿ ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಭಾನುವಾರ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಯೋಗಪಟುಗಳು ಪಾಲ್ಗೊಂಡಿದ್ದರು   

ಮೈಸೂರು: ‘ಯೋಗ ಎಂಬ ಅತ್ಯದ್ಭುತ ಹಾಗೂ ಪರಿಣಾಮಕಾರಿ ಕಲೆಯನ್ನು ಮನೆ ಮನೆಗೆ ತೆಗೆದುಕೊಂಡು ಹೋಗುವ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಯೋಗ ಫೆಡರೇಷನ್ ಆಫ್ ಮೈಸೂರು ಟ್ರಸ್ಟ್ ಹಾಗೂ ಅರಮನೆ ಆಡಳಿತ ಮಂಡಳಿಯಿಂದ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ರಥಸಪ್ತಮಿ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ 108 ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮೈಸೂರಿನಲ್ಲಿ ಯೋಗ ಪರಂಪರೆ ಇದೆ. ಅದನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ಯೋಗದ ಮಗ್ಗಲು ಬದಲಿಸುವ ಕಾರ್ಯವನ್ನು ಮೈಸೂರು ಯೋಗ ಫೌಂಡೇಶನ್ ಹಾಗೂ ಗುರು ಶ್ರೀಹರಿ ಮತ್ತು ತಂಡ ನಿರಂತರವಾಗಿ ಮಾಡುತ್ತಾ ಬಂದಿದೆ. ಅದಕ್ಕೆ ಪೂರಕವಾಗಿ ಯೋಗ, ನ್ಯಾಚುರೋಪತಿ ಹಾಗೂ ಆಯುರ್ವೇದ ಇಲಾಖೆಗಳು ಕೈಜೋಡಿಸುತ್ತಿವೆ’ ಎಂದು ಹೇಳಿದರು.

ADVERTISEMENT

‌‘ಇಂದು ಮಧುಮೇಹ ಸರ್ವೇಸಾಮಾನ್ಯ ಎನ್ನುವಂತಾಗಿದೆ. ಅದನ್ನು ನಿಯಂತ್ರಿಸದಿದ್ದಲ್ಲಿ ಭವಿಷ್ಯದಲ್ಲಿ ದುಬಾರಿ ಬೆಲೆ ತೆರಬೇಕಾಗುತ್ತದೆ. ಆ ಕಾರಣಕ್ಕಾಗಿ ಎಲ್ಲರಿಗೂ ಯೋಗ ಅನಿವಾರ್ಯವಾಗಿದೆ’ ಎಂದರು.

‘ಮುಂಬರುವ ಯೋಗ ದಿನದಂದು ಹೆಚ್ಚಿನ ಜನರನ್ನು ಸೇರಿಸಿ ದಾಖಲೆ ಮಾಡಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ’ ಎಂದು ತಿಳಿಸಿದರು.

ಉಪ ಮೇಯರ್‌ ಡಾ.ಜಿ.ರೂಪಾ ಯೋಗೇಶ್, ಯೋಗ ಗುರು ಶ್ರೀಹರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.