ADVERTISEMENT

ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇಗುಲ ಪುನರ್ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 8:15 IST
Last Updated 25 ನವೆಂಬರ್ 2020, 8:15 IST
ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.   

ಮೈಸೂರು: ತಲಕಾಡಿನ ಪಂಚಲಿಂಗಗಳಲ್ಲಿ ಒಂದಾಗಿರುವ ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲ ಪುನರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ದೇಗುಲ ಶಿಥಿಲಗೊಂಡಿರುವುದರಿಂದ ₹ 30 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತಿದೆ.

ಮೂಲ ದೇವರ ವಿಗ್ರಹಗಳನ್ನು ಹಾಗೇ ಉಳಿಸಿಕೊಂಡು ದೇಗುಲವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗುತ್ತಿದೆ.

ADVERTISEMENT

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.