ADVERTISEMENT

ಮೈಸೂರು: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2021, 6:17 IST
Last Updated 27 ಡಿಸೆಂಬರ್ 2021, 6:17 IST
ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೇಜೇಷನ್ (ಎಐಡಿಎಸ್ಒ)  ನೇತೃತ್ವದಲ್ಲಿ ಪ್ರತಿಭಟನೆ
ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೇಜೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಪ್ರತಿಭಟನೆ   

ಮೈಸೂರು: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೇಜೇಷನ್ (ಎಐಡಿಎಸ್ಒ) ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹಲವು ದಿನಗಳಿಂದ‌ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು‌ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದು.

ಎಲ್ಲ ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು ಇದ್ದಾರೆ. ಒಂದು ವೇಳೆ ಅವರನ್ನು ಕಾಯಂಗೊಳಿಸದೇ ಹೋದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.