ADVERTISEMENT

ಮೈಸೂರು: ನಿಷೇಧಿತ ಸ್ಥಳದಲ್ಲಿ ಧಾರ್ಮಿಕ ಚಟುವಟಿಕೆ: ಸಂಸದ ಕಿಡಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 1:02 IST
Last Updated 18 ಜನವರಿ 2021, 1:02 IST
ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಮುಸ್ಲಿಂ ಸಮುದಾಯದವರು ನಡೆಸುತ್ತಿದ್ದ ಧಾರ್ಮಿಕ ಚಟುವಟಿಕೆ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಭಾನುವಾರ ಭೇಟಿ ನೀಡಿ ಸ್ಥಗಿತಗೊಳಿಸಿದರು
ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಮುಸ್ಲಿಂ ಸಮುದಾಯದವರು ನಡೆಸುತ್ತಿದ್ದ ಧಾರ್ಮಿಕ ಚಟುವಟಿಕೆ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಭಾನುವಾರ ಭೇಟಿ ನೀಡಿ ಸ್ಥಗಿತಗೊಳಿಸಿದರು   

ಹುಣಸೂರು: ಕಟ್ಟೆಮಳಲವಾಡಿ ಗ್ರಾಮದ ಧಾರ್ಮಿಕ ವಿವಾದಿತ ಸ್ಥಳದಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆ ನಡೆಯದಂತೆ ನ್ಯಾಯಾಲಯ ಸೂಚಿಸಿದ್ದರೂ ಭಾನುವಾರ ಧಾರ್ಮಿಕ ಕಾರ್ಯಕ್ರಮ ನಡೆದಿದ್ದಾಗ ಸಂಸದ ಪ್ರತಾಪಸಿಂಹ ಭೇಟಿ ನೀಡಿ ಸ್ಥಗಿತಗೊಳಿಸಿದರು.

ಗ್ರಾಮದ ಸಿಡಿ ಮಾರಮ್ಮ, ಗಣೇಶ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಮುಸ್ಲಿಂ ಸಮುದಾಯದವರ ಈದ್ಗಾ ಮೈದಾನದ ವಿವಾದ ನ್ಯಾಯಾಲಯ ದಲ್ಲಿದ್ದು, ಈ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಯದಂತೆ ತಡೆಯಾಜ್ಞೆ ಜಾರಿಯಲ್ಲಿದೆ. ಸ್ಥಳೀಯರು ನ್ಯಾಯಾಲಯದ ಆದೇಶವನ್ನು ಗಣನೆಗೆ ತೆಗೆದುಕೊಳ್ಳದೆ ಭಾನುವಾರ ಭೋಜನ ಕೂಟ ಹಮ್ಮಿಕೊಂಡಿದ್ದರು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಸ್ಥಳೀಯರಲ್ಲಿ ಮನವಿ ಮಾಡಿದರು.

ಎಚ್ಚರ: ಹುಣಸೂರು ಗ್ರಾಮಾಂತರ ಪಿಎಸ್ಐ ಶಿವಪ್ರಕಾಶ್ ಅವರಿಗೆ ಸಂಸದರು ನಿರ್ಬಂಧಿತ ಪ್ರದೇಶದಲ್ಲಿ ಧಾರ್ಮಿಕ ಚಟುವಟಿಕೆ ನಡೆಯದಂತೆ ಕಟ್ಟು ಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಿ ಕೋಮು ಸಂಘರ್ಷ ಎದುರಾಗದಂತೆ ಕ್ರಮವಹಿಸಲು ಆದೇಶಿಸಿದರು.

ADVERTISEMENT

ಭೇಟಿ ಸಮಯದಲ್ಲಿ ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.