ADVERTISEMENT

ಮೈಸೂರು: ಸಚಿವ ಮಹದೇವಪ್ಪ ಅವರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 4:17 IST
Last Updated 26 ಜನವರಿ 2025, 4:17 IST
   

ಮೈಸೂರು: ಇಲ್ಲಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.‌ಮಹದೇವಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.‌

ಈ ಸಂದರ್ಭ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗುತ್ತಿರುವ ಪ್ರಯೋಜನಗಳ ಕುರಿತು ವಿವರಿಸಿದರು.

ಪಥ ಸಂಚಲನ:

ADVERTISEMENT

ಪ್ರಧಾನ ದಳಪತಿ ಎಸ್‌.ಡಿ‌. ಸಾಸನೂರು ನೇತೃತ್ವದಲ್ಲಿ 27 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಶ್ವಾರೋಹಿ ದಳ, ವಿವಿಧ ಪೊಲೀಸ್ ತುಕಡಿಗಳು, ಗೃಹರಕ್ಷಕ ದಳ, ಎನ್ ಸಿಸಿ, ಪೊಲೀಸ್ ಪಬ್ಲಿಕ್ ಶಾಲೆ, ಜವಾಹರ ನವೋದಯ ವಿದ್ಯಾಲಯ, ಸ್ಕೌಟ್ಸ್, ಭಾರತ ಸೇವಾದಳ, ತಿಲಕ್ ನಗರ ಅಂಧರ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡರು.

ನಂತರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.