
ಮೈಸೂರು: ‘ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಒಟ್ಟಿಗೆ ದುಡಿಯುವ ಸಂಕಲ್ಪ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ ಹೇಳಿದರು.
ಇಲ್ಲಿನ ವಿವಿಯ ಆಡಳಿತ ಭವನದ ಎದುರು ಸೋಮವಾರ 77ನೇ ಗಣರಾಜ್ಯೋತ್ಲವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ನಾವು ಮನಸ್ಥಿತಿ ಬದಲಿಸಿಕೊಳ್ಳಬೇಕು. ಸಹೋದರತೆಯ ಭಾವನೆಯ ಮೂಲಕ ಸದೃಢ ಸಮಾಜ ನಿರ್ಮಿಸಬೇಕು’ ಎಂದರು.
‘ಅಂಬೇಡ್ಕರ್ ಅವರು ನೀಡಿರುವ ಸಂವಿಧಾನವನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು’ ಎಂದು ಸಲಹೆ ಮಾಡಿದರು.
‘ಸ್ವಾತಂತ್ರ್ಯ ನಂತರ ದೇಶದಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದರೂ ಸಂಶೋಧನಾ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿ ಆಗಬೇಕು’ ಎಂದು ಆಶಿಸಿದರು.
ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರಧಾನ ಭಾಷಣ ಮಾಡಿದರು. ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್, ಶೈಕ್ಷಣಿಕ ಡೀನ್ ಪ್ರೊ.ರಾಮನಾಥಂ ನಾಯ್ಡು, ಪರೀಕ್ಷಾಂಗ ಕುಲಸಚಿವ ಸಿ.ಎಸ್. ಆನಂದಕುಮಾರ್, ಅಧ್ಯಯನ ಕೇಂದ್ರ ಡೀನ್ ಎನ್.ಆರ್. ಚಂದ್ರೇಗೌಡ, ರಾಜೀವ್‌ಗಾಂಧಿ ಆರೋಗ್ಯ ವಿವಿ ಸಿಂಡಿಕೇಟ್ ಸದಸ್ಯ ರಾಮನಾಥ್, ಕಾರ್ಯಕ್ರಮ ಸಂಯೋಜನಾಧಿಕಾರಿ ಕೃಷ್ಣಪ್ಪ ಬಿ. ನಿಂಬಕ್ಕನವರ, ಸಂಪನ್ಮೂಲ ವ್ಯಕ್ತಿ ಎಸ್.ಡಿ. ದಯಾನಂದ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.