ADVERTISEMENT

ಅರ್ಜಿ ಮರು ಪರಿಶೀಲನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 12 ಮೇ 2019, 6:39 IST
Last Updated 12 ಮೇ 2019, 6:39 IST

ಹುಣಸೂರು: ಅರಣ್ಯ ಹಕ್ಕು ಮಾನ್ಯತೆಗೆ ಆದಿವಾಸಿಗಳು ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರೂ, ರಾಜ್ಯ ಹಾಗೂ ಕೇಂದ್ರ ಸರ್ಕಾರ ಈಗಾಗಲೇ ಸಲ್ಲಿಸಿದ ಅರ್ಜಿ ಮಾನ್ಯ ಮಾಡುವಂತೆ ಸೂಚಿಸಿದೆ.

ಜಿಲ್ಲೆಯ 215 ಹಾಡಿಗಳಲ್ಲಿ ಈಗಾಗಲೇ 117 ಹಾಡಿಗಳ ಫಲಾನುಭವಿಗಳು ಸರ್ಕಾರಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿದ್ದಾರೆ. ಈ ಮಧ್ಯೆ ಸುಪ್ರೀಕೋರ್ಟ್ ಅರಣ್ಯ ಹಕ್ಕು ಮಾನ್ಯತೆಯನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದು, ಇದನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ತಡೆ ಹಿಡಿದು ಈಗಾಗಲೇ ಅರ್ಜಿ ಸಲ್ಲಿಸಿದ ಆದಿವಾಸಿ ಗಿರಿಜನರ ಅರ್ಜಿಯನ್ನು ಪರಿಶೀಲಿಸುವಂತೆ ಸೂಚನೆ ನೀಡಿದೆ.

ಹುಣಸೂರು, ಪಿರಿಯಾಪಟ್ಟಣ ಮತ್ತು ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಒಟ್ಟು 2,500 ಆದಿವಾಸಿಗರು ಅರಣ್ಯ ಹಕ್ಕು ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳನ್ನು ಹುಣಸೂರು ಉಪವಿಭಾಗಾಧಿಕಾರಿ ಕಚೇರಿಯಲ್ಲೇ ತಡೆ ಹಿಡಿದಿದೆ. ಸರ್ಕಾರಿ ಆದೇಶದನ್ವಯ ಮುಂಚೆಯೇ ಸಲ್ಲಿಸಿದ್ದ ಅರ್ಜಿದಾರರ ಮನವಿಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಅದರಂತೆ ಆದಿವಾಸಿಗಳಿಗೆ 10 ಎಕರೆ ಕೃಷಿ ಭೂಮಿ ನೀಡಿ, ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಡೀಡ್ ಸಂಸ್ಥೆ ನಿರ್ದೇಶಕ ಶ್ರೀಕಾಂತ್ ಮನವಿ ಮಾಡಿದ್ದಾರೆ.

ADVERTISEMENT

ಮರುಪರಿಶೀಲನೆ: ತಾಲ್ಲೂಕಿನ 2,500 ಆದಿವಾಸಿಗಳು 2010ರಲ್ಲೇ ಸಲ್ಲಿಸಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಸಮಿತಿ ಮರುಪರಿಶೀಲನೆ ನಡೆಸಬೇಕು. ನೂತನವಾಗಿ ಅರ್ಜಿ ಸಲ್ಲಿಸುವವರಿಗೂ ಅವಕಾಶ ಕಲ್ಪಿಸಬೇಕು ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.