ADVERTISEMENT

ಕೋಚನಹಳ್ಳಿ ರೈತರಿಂದ ಮನವಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 17:02 IST
Last Updated 15 ಜೂನ್ 2021, 17:02 IST
ಕೋಚನಹಳ್ಳಿ ರೈತರ ಹೋರಾಟ ಸಮಿತಿಯ ಸದಸ್ಯರು ಮಂಗಳವಾರ ಮೈಸೂರಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು
ಕೋಚನಹಳ್ಳಿ ರೈತರ ಹೋರಾಟ ಸಮಿತಿಯ ಸದಸ್ಯರು ಮಂಗಳವಾರ ಮೈಸೂರಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು   

ಮೈಸೂರು: ಕೋಚನಹಳ್ಳಿ ರೈತರ ಹೋರಾಟ ಸಮಿತಿಯ ಸದಸ್ಯರು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಕಳೆದ 87 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈಗಲಾದರೂ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದರು.

ಕೈಗಾರಿಕೆಗಳಿಗೆ ಭೂಮಿ ನೀಡಿದ ರೈತರ ಕುಟುಂಬಕ್ಕೆ ಸರ್ಕಾರ ಉದ್ಯೋಗ ನೀಡುವ ಭರವಸೆ ನೀಡಬೇಕು, ಕೈಗಾರಿಕೆ ಸ್ಥಾಪಿಸದೇ ಬಾಕಿ ಉಳಿದ ಭೂಮಿಯನ್ನು ರೈತರಿಗೆ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.