ನಂಜನಗೂಡು: ಕಾಂತಾರ– 1 ಚಲನಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಗುರುವಾರ ಚಿತ್ರ ನಟ ರಿಷಬ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ರಿಷಬ್ ಶೆಟ್ಟಿ ರಾಜ್ಯದ ಜನರ ಅಭೂತಪೂರ್ವ ಬೆಂಬಲದಿಂದ ಕಾಂತಾರ ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ರಾಜ್ಯದ ಚಿತ್ರರಸಿಕರ ಪ್ರೀತಿ ವಿಶ್ವಾಸಕ್ಕೆ ಚಿರಋಣಿ ಖುಣಿಯಾಗಿದ್ದೇನೆ, ಮುಂದಿನ ದಿನಗಳಲ್ಲಿ ಕುಟುಂಬ ಸಮೇತ ಬಂದು ಸ್ವಾಮಿಯ ದರ್ಶನ ಪಡೆಯುತ್ತೇನೆ’ ಎಂದು ಹೇಳಿದರು.
ದೇವಾಲಯದ ಆವರಣದಲ್ಲಿ ಯುವಕರು ನೆಚ್ಚಿನ ನಟನ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗಿಸಿಕೊಂಡು ಕಾರಿನ ಮೇಲೆ ನಿಂತು ಕೈಬೀಸಿ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.