ಮೈಸೂರಿನ ಕೃಷ್ಣಮೂರ್ತಿಪುರಂನ ರಾಘವೇಂದ್ರ ಮಠಕ್ಕೆ ರಿಷಿ ಸುನಕ್ ಅವರ ತಂದೆ ಯಶಿರ್ ಸುನಕ್ ಹಾಗೂ ಉಷಾ ಸುನಕ್ ಭೇಟಿ ನೀಡಿದರು
ಮೈಸೂರು: ಯುನೈಟೆಡ್ ಕಿಂಗ್‌ಡಂ (ಯುಕೆ) ಮಾಜಿ ಪ್ರಧಾನಿ ರಿಷಿ ಸುನಕ್ ಅವರ ಪೋಷಕರು ಸೋಮವಾರ ಕೃಷ್ಣಮೂರ್ತಿಪುರಂನ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದರು.
ರಿಷಿ ಸುನಕ್ ತಂದೆ ಯಶಿರ್ ಸುನಕ್ ಹಾಗೂ ಉಷಾ ಸುನಕ್ ಅವರು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿದ ಬಳಿಕ ಗೋವುಗಳಿಗೆ ಆಹಾರ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.