ಬೆಟ್ಟದಪುರ: ಗ್ರಾಮದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ರಸ್ತೆ ಅಭಿವೃದ್ಧಿಗೆ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ಸರ್ಕಾರದ ವತಿಯಿಂದ ₹ 50 ಕೋಟಿ ಮಂಜೂರು ಮಾಡಿಸಿದ ಹಿನ್ನೆಲೆಯಲ್ಲಿ ಸಮೀಪದ ಬೆಟ್ಟದತುಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು, ಮುಖಂಡರು, ಜನಪ್ರತಿನಿಧಿಗಳು ಭಾನುವಾರ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕುಡುಕೂರು ಪ್ರಕಾಶ್ ರಾಜೇ ಅರಸ್, ಚಿಕ್ಕೇಗೌಡ, ಬಾರ್ಸೆ ಚಂದ್ರಪ್ಪ, ಯಶೋದಾರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣೆಗೌಡ, ರಾಮೇಗೌಡ, ಶೇಖರ್, ಡಿ.ಜಿ. ಕೂಪ್ಪಲು ಪ್ರಸನ್ನ, ಬಲರಾಮೇಗೌಡ, ಸ್ವಾಮಿ ಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.