ADVERTISEMENT

ಮೈಸೂರು | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್‌ ಕಾರ್ತಿಕ್ ಕೊಲೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 4:02 IST
Last Updated 5 ಮೇ 2025, 4:02 IST
   

ಮೈಸೂರು: ತಾಲ್ಲೂಕಿನ ವರುಣಾ ಗ್ರಾಮದ ಬಳಿಯ ಹೋಟೆಲ್ ಮುಂಭಾಗ ಭಾನುವಾರ ತಡರಾತ್ರಿ ರೌಡಿಶೀಟರ್‌ನನ್ನು ಮಚ್ಚಿನಿಂದ ಹಲ್ಲೆ ಮಾಡಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್ (33) ಕೊಲೆಯಾದ ವ್ಯಕ್ತಿ. 'ಹಳೆ ವೈಷಮ್ಯದಿಂದ ಕೊಲೆ ನಡೆದಿದೆ. ಮೃತದೇಹವನ್ನು ಕೆ.ಆರ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರುಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.