ಮೈಸೂರು: ‘ಹಳ್ಳಿಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿಗೆ ಸಹಕಾರಿಯಾಗಲಿದೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ತಾಲ್ಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿರುವ ‘ಯೂತ್ ಫಾರ್ ಮೈ ಭಾರತ್’ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಗಾಂಧೀಜಿಯ ಕನಸು ನನಸಾಗಬೇಕಾದರೆ ಹಳ್ಳಿಗಳಲ್ಲಿ ಮೂಲಸೌಕರ್ಯ, ದುಡಿಯುವ ಕೈಗಳಿಗೆ ಉದ್ಯೋಗ ದೊರೆತು ಸ್ವಾವಲಂಬಿಯಾಗಬೇಕಿದೆ’ ಎಂದರು.
‘ವರ್ಷಗಳ ಹಿಂದೆ ಹಳ್ಳಿಯಲ್ಲಿ ಜನರು ರಸ್ತೆಗಳನ್ನು, ಚರಂಡಿಗಳನ್ನು ಸ್ವತಃ ನಿರ್ಮಿಸಿಕೊಳ್ಳುತ್ತಿದ್ದರು. ಈಗ ಎಲ್ಲವನ್ನೂ ಸರ್ಕಾರ ಮಾಡಲಿ ಎನ್ನುತ್ತಿದ್ದಾರೆ. ಈ ಧೋರಣೆ ಸರಿಯಲ್ಲ. ವಿದ್ಯಾರ್ಥಿಗಳು ಗ್ರಾಮ ಸೇವೆಯ ಅನುಭವ ಹೊಂದಬೇಕು’ ಎಂದು ಸಲಹೆ ನೀಡಿದರು.
ವಿದ್ಯಾವರ್ಧಕ ಸಂಘದ ಖಜಾಂಚಿ ಶ್ರೀಶೈಲ ರಾಮಣ್ಣವರ್, ಪ್ರಾಂಶುಪಾಲ ಎಸ್.ಮರೀಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಸದಸ್ಯರಾದ ಭಗವಂತಸ್ವಾಮಿ, ಪುಟ್ಟಲಕ್ಷ್ಮಮ್ಮ, ದೊಡ್ಡೇಗೌಡ, ಶಿವಮ್ಮ ಪುಟ್ಟೇಗೌಡ, ದ್ರಾಕ್ಷಾಯಿಣಿ ಸೋಮೇಶ್, ದಾರಿಪುರ ಬಸವಣ್ಣ, ಕೆಂಡಗಣ್ಣ, ರಾಮಚಾರಿ, ಮಾದೇಗೌಡ, ಸತ್ತಿಗೆಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.