ADVERTISEMENT

ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 16:09 IST
Last Updated 24 ಜೂನ್ 2019, 16:09 IST

ಮೈಸೂರು: ಮೈಸೂರು ಜಿಲ್ಲಾ ಮಟ್ಟದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಿತಿಯು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಸಿದ್ಧಪಡಿಸಿರುವ 2019-20ನೇ ಸಾಲಿನ ಕ್ರಿಯಾ ಯೋಜನೆಯನ್ನು ಪರಿಶೀಲಿಸಿತು.

ಗ್ರಾಮೀಣ ಕುಡಿಯುವ ನೀರಿಗಾಗಿ 2019-20ನೇ ಸಾಲಿನಲ್ಲಿ ₹ 74 ಕೋಟಿ ವೆಚ್ಚ ಮತ್ತು ವಿಶೇಷ ಅಭಿವೃದ್ಧಿ ಯೋಜನೆಯಡಿ, ₹ 18.62 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಂ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಿತು.

ಕ್ರಿಯಾ ಯೋಜನೆಯನ್ನು ಆಯಾ ಗ್ರಾಮ ಸಮಿತಿಯಲ್ಲಿ ಚರ್ಚಿಸಿ, ಜಿಲ್ಲಾ ಮಟ್ಟದಲ್ಲಿ ಸಿದ್ಧಪಡಿಸಲಾಗಿರುತ್ತದೆ. ಸಭೆಯಲ್ಲಿ ಶಾಸಕರಾದ ಕೆ.ಮಹದೇವ್, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟಸ್ವಾಮಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಚ್ಯುತಾನಂದ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.