ಹುಣಸೂರು: ತಾಲ್ಲೂಕಿನ ಮರೂರು ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸದಾಶಿವ ಮತ್ತು ಉಪಾಧ್ಯಕ್ಷರಾಗಿ ಶಿವರಾಜ್ ಅವಿರೋಧವಾಗಿ ಆಯ್ಕೆಗೊಂಡರು.
ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ರಾಜಣ್ಣ ಅವಿರೋಧವಾಗಿ ಆಯ್ಕೆಯನ್ನು ಪ್ರಕಟಿಸಿದರು.
ನೂತನವಾಗಿ ನಿರ್ದೇಶಕರಾಗಿ ನಂಜಪ್ಪ, ಮಂಜು, ಮಹದೇವ, ಮೊಹಮದ್ ಸೋಹೆಲ್, ಸಿದ್ದನಾಯಕ, ಸನಾವುಲ್ಲಾ, ಅಂಬಿಕಾ ಮತ್ತು ಭಾಗ್ಯಮ್ಮ ಆಯ್ಕೆಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.