ADVERTISEMENT

ಹಂಚೀಪುರ ಗ್ರಾಮದಲ್ಲಿ ಕಾಣಿಸಿಕೊಂಡ ಹುಲಿ

ಸ್ಥಳಕ್ಕೆ ಆಗಮಿಸದ ಅರಣ್ಯ ಇಲಾಖೆ ಸಿಬ್ಬಂದಿ: ರಸ್ತೆ ತಡೆ ನಡೆಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2025, 4:42 IST
Last Updated 23 ನವೆಂಬರ್ 2025, 4:42 IST
ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದ ಮಾರಮ್ಮ ಗುಡಿ ಎದುರು ಜಮೀನಿನಲ್ಲಿ ಶನಿವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದ್ದರು ಸಹ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದ ಮಾರಮ್ಮ ಗುಡಿ ಎದುರು ಜಮೀನಿನಲ್ಲಿ ಶನಿವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದ್ದರು ಸಹ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು   

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಮಾರಮ್ಮ ಗುಡಿ ಎದುರು ಜಮೀನಿನಲ್ಲಿ ಶನಿವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದ್ದರೂ ಅರಣ್ಯ ಇಲಾಖೆಯವರು ಸ್ಥಳಕ್ಕೆ ಬಾರದ ಹಿನ್ನಲೆಯಲ್ಲಿ ರಸ್ತೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಬಿ. ಮಟಕರೆ ಮತ್ತು ಸರಗೂರು ಮುಖ್ಯ ರಸ್ತೆಯ ಬಳಿ ಹಂಚೀಪುರ ಗ್ರಾಮದ ಪಾಪಣ್ಣ ಮತ್ತು ಪುಟ್ಟಯ್ಯ ಅವರು ಜಮೀನಿಗೆ ಬೆಳ್ಳಿಗೆ ನೀರು ಹಾಯಿಸಲು ಹೋಗಿದ್ದಾಗ ಹುಲಿ ಕಾಣಿಸಿದೆ. ಆದರೆ ಸಂಜೆ 4 ಗಂಟೆಯಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಿದ್ದರಿಂದ ಜನರು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆ ತಡೆಯಿಂದಾಗಿ ವಿವಿಧ ಊರುಗಳಿಗೆ ಹೋಗಬೇಕಾದ ಪ್ರಯಾಣಿಕರು ತೊಂದರೆ ಅನುಭವಿಸಿದರು. 

ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್‌ ಪ್ರಸನ್ನಕುಮಾರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಅರಣ್ಯ ಇಲಾಖೆಯವರು ಬಂದು ಹುಲಿ ಸರೆಗೆ ಕಾರ್ಯಾಚರಣೆ ಆರಂಭಿಸುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ADVERTISEMENT

ಹೆಗ್ಗನೂರು ಗ್ರಾಮದಲ್ಲಿ ಮೂರು ದಿನಗಳ ಹಿಂದಷ್ಟೇ ಗ್ರಾಮದ ಸರಗೂರಯ್ಯ ಎಂಬವರು ದನ ಮೇಯಿಸಲು ಹೋಗಿದ್ದ ವೇಳೆ ಮಧ್ಯಾಹ್ನ ಸಮಯದಲ್ಲಿ ಪುಟ್ಟಮಾದು ಎಂಬವರ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಇದನ್ನು ಕಣ್ಣಾರೆ ಕಂಡ ಸರಗೂರಯ್ಯ ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಕ್ರಮ ಕೈಗೊಂಡಿಲ್ಲ ಎಂಬುದು ಆರೋಪವಾಗಿದೆ.

ಸ್ಥಳಕ್ಕೆ ಆಗಮಿಸಿದ ಎಸಿಎಫ್ ಪರಮೇಶ್ ಹಾಗೂ ಸುಮಿತ್ರ ಮಾತನಾಡಿ, ಹುಲಿ ಇರುವ ಸ್ಥಳದಲ್ಲಿ ನಮ್ಮ ಸಿಬ್ಬಂದಿ ಕಾರ್ಯಾಚರಣೆ ಮಾಡುತ್ತಿದ್ದು, ನಾಳೆ ಹುಲಿ ಹಿಡಿಯಲು ಕೂಂಬಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದ ನಂತರ ಪ್ರತಿಭಟನೆ ಕೈಬಿಟ್ಟರು.