
ಮೈಸೂರು ಪೊಲೀಸ್ ತರಬೇತಿ ಶಾಲೆ ಆಯೋಜಿಸಿದ್ದ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ 150ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕ್ಯತಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಪೊಲೀಸ್ ಅಕಾಡೆಮಿಯ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಏಕತ ಓಟದಲ್ಲಿ ಭಾಗವಹಿಸಿದರು. ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಬೋರಲಿಂಗಯ್ಯ, ಪೊಲೀಸ್ ಅಕಾಡೆಮಿ ನಿರ್ದೇಶಕ ಚನ್ನಬಸವಣ್ಣ ಹಾಗೂ ಇತರರು ಭಾಗವಹಿಸಿದರು.
ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.
ಮೈಸೂರು: ಇಲ್ಲಿನ ಪೊಲೀಸ್ ತರಬೇತಿ ಅಕಾಡೆಮಿಯು ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಅಂಗವಾಗಿ ಗುರುವಾರ ಬೆಳಿಗ್ಗೆ ಆಯೊಜಿಸಿದ್ದ ಏಕತಾ ಓಟದಲ್ಲಿ ಅಕಾಡೆಮಿಯ ಪಿಎಸ್ಐ ಪ್ರಶಿಕ್ಷಣಾರ್ಥಿಗಳು ಏಕತಾ ಓಟದಲ್ಲಿ ಭಾಗವಹಿಸಿದರು.
ಎಡಿಜಿಪಿ ಅಲೋಕ್ ಕುಮಾರ್ ಮಾತನಾಡಿ, 'ಅಕಾಡೆಮಿಯಲ್ಲಿ ಕುಟುಂಬದ ಭಾವನೆ ತುಂಬುವ ಉದ್ದೇಶದಿಂದ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾನೂನು ಹಾಗೂ ಸಾಮಾಜಿಕ ಪರಿಸ್ಥಿತಿಗೆ ಸರಿಯಾಗಿ ತರಬೇತಿ ನೀಡಲಾಗುತ್ತಿದೆ. ಫಿಟ್ನೆಸ್ ನ್ನು ತರಬೇತಿಯಿಂದ ಕೆಲಸದ ಜಾಗದಲ್ಲೂ ಅಳವಡಿಸಿಕೊಳ್ಳಬೇಕು' ಎಂದರು.
ಐಜಿಪಿ ಬೋರಲಿಂಗಯ್ಯ, ಜರ್ಮನ್ ದೇಶದ ಬವೇರಿಯಾದ ಎಡಿಜಿಪಿ ಮ್ಯಾನ್ ಫೆಲ್ಡ್ ಗೀಗಲ್, ರಾಲ್ಪ್ ಈರ್ನರ್, ಪೊಲೀಸ್ ಅಕಾಡೆಮಿ ನಿರ್ದೇಶಕ ಚನ್ನಬಸವಣ್ಣ ಅವರೂ ಪ್ರಶಿಕ್ಷಣಾರ್ಥಿಗಳೊಂದಿಗೆ ಭಾಗವಹಿಸಿ ಪ್ರೋತ್ಸಾಹ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.