ADVERTISEMENT

ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2025, 10:03 IST
Last Updated 26 ಮಾರ್ಚ್ 2025, 10:03 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.‌

ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಎಂ. ಇರ್ಫಾನುಲ್ಲಾ ಷರೀಫ್ ಹಾಗೂ ಕಲಬುರಗಿಯ ಶರಣ ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಣಾಯಿಣಿ ಅಪ್ಪಾ ಗೌರವ ಡಾಕ್ಟರೇಟ್ ಪಡೆದ ಇನ್ನಿಬ್ಬರು.

ADVERTISEMENT

ಗುರುವಾರ ಮೈಸೂರಿನ ಮುಕ್ತ ವಿ.ವಿ.‌ ಭವನದಲ್ಲಿ ನಡೆಯಲಿರುವ ವಿಶ್ವವಿದ್ಯಾಲಯದ ಇಪ್ಪತ್ತನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಪತಿ ವಿ. ಶರಣಪ್ಪ ಹಲಸೆ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದೇ ವೇಳೆ 17,307 ಮಂದಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

ಜಾರಕಿಹೊಳಿ ಅವರ ಸಮಾಜಸೇವೆಯನ್ನು ಗುರುತಿಸಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ' ಎಂದು ಸ್ಪಷ್ಟನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.