ADVERTISEMENT

ಸಂಕ್ಷಿಪ್ತ ಸುದ್ದಿ: ಜಿ.ಬಿ. ಹರೀಶ್‌ಗೆ ‘ವೀರ ಸಾವರ್ಕರ್ ಸಮ್ಮಾನ್’

​ಪ್ರಜಾವಾಣಿ ವಾರ್ತೆ
Published 27 ಮೇ 2025, 1:02 IST
Last Updated 27 ಮೇ 2025, 1:02 IST
<div class="paragraphs"><p>ಜಿ.ಬಿ.ಹರೀಶ್‌</p></div>

ಜಿ.ಬಿ.ಹರೀಶ್‌

   

ಜಿ.ಬಿ. ಹರೀಶ್‌ಗೆ ‘ವೀರ ಸಾವರ್ಕರ್ ಸಮ್ಮಾನ್’

ಮೈಸೂರು: ನಗರದ ಸಾವರ್ಕರ್ ಪ್ರತಿಷ್ಠಾನದಿಂದ ನೀಡಲಾಗುವ ‘ವೀರ ಸಾವರ್ಕರ್ ಸಮ್ಮಾನ್’ಗೆ ಬೆಂಗಳೂರಿನ ವಂದೇಮಾತರಂ ಪಾಠಶಾಲೆಯ ಸಂಸ್ಥಾಪಕ, ಲೇಖಕ ಜಿ.ಬಿ.ಹರೀಶ್ ಅವರನ್ನು ಆಯ್ಕೆ ಮಾಡಲಾಗಿದೆ. ಇದು, ₹1 ಲಕ್ಷ ಮತ್ತು ಸಾವರ್ಕರ್ ಪುತ್ಥಳಿ ಹೊಂದಿದೆ.

‘ಮೇ 29ರಂದು ಸಂಜೆ 5.30ಕ್ಕೆ ಇಲ್ಲಿನ ಕಲಾಮಂದಿರದಲ್ಲಿ ನಡೆಯುವ 142ನೇ ಸಾವರ್ಕರ್ ಜಯಂತಿಯಲ್ಲಿ ಪ್ರದಾನ ಮಾಡಲಾಗುವುದು’ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಸಂದೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಪ್ರಜ್ಞಾ ಕೃತಿ

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನೀಡುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಧಾರವಾಡದ ಲೇಖಕಿ ಪ್ರಜ್ಞಾ ಮತ್ತಿಹಳ್ಳಿ ಅವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿಯು ₹10 ಸಾವಿರ ನಗದು ಹೊಂದಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ.

ಪ್ರಜ್ಞಾ ಮತ್ತಿಹಳ್ಳಿ ಅವರು ಮೂಲತಃ ಉತ್ತರಕನ್ನಡ ಜಿಲ್ಲೆಯ ಶಿರಸಿಯವರಾಗಿದ್ದು ಪ್ರಸ್ತುತ ಅವರು ಕಿತ್ತೂರು ಸರ್ಕಾರಿ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

64 ಕ್ವಿಂಟಲ್‌ ಅಕ್ಕಿ ಅಕ್ರಮ ಸಂಗ್ರಹ: ದೂರು

ಬೆಳಗಾವಿ: ತಾಲ್ಲೂಕಿನ ಪೀರನವಾಡಿ ಗ್ರಾಮದ ಮನೆಯಲ್ಲಿ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಂಡ ಆರೋಪದ ಮೇಲೆ ಸ್ಥಳೀಯ ನಿವಾಸಿ ಸಂಜಯ ಸುಬ್ಬರಾವ್‌ ಭೋಸಲೆ ಎಂಬುವರ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆಹಾರ ನಿರೀಕ್ಷಕ ಸುರೇಶ ಉಪ್ಪಾರ ಭಾನುವಾರ ರಾತ್ರಿ ದೂರು ದಾಖಲಿಸಿದ್ದಾರೆ. ಆರೋಪಿ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.