ADVERTISEMENT

ಪಿರಿಯಾಪಟ್ಟಣ | ಪರಿಶಿಷ್ಟರ ಅಭಿವೃದ್ಧಿಗೆ ಕೈಜೋಡಿಸಿ: ತಹಶೀಲ್ದಾರ್ ನಿಸರ್ಗ ಪ್ರಿಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 5:11 IST
Last Updated 22 ಸೆಪ್ಟೆಂಬರ್ 2025, 5:11 IST
ಪಿರಿಯಾಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಈಚೆಗೆ ಏರ್ಪಡಿಸಿದ್ದ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಕ್ರಮವನ್ನು ತಹಶೀಲ್ದಾರ್ ನಿಸರ್ಗಪ್ರಿಯ ಉದ್ಘಾಟಿಸಿದರು. ಎನ್.ಬಿ.ಚಂದ್ರಶೇಖರ್, ವಸಂತ ಲಕ್ಷ್ಮೀ, ಡಾ.ಸೋಮಯ್ಯ, ಪಿ.ಪಿ.ಲತಾ ಇತರರು ಇದ್ದಾರೆ 
ಪಿರಿಯಾಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಈಚೆಗೆ ಏರ್ಪಡಿಸಿದ್ದ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಕ್ರಮವನ್ನು ತಹಶೀಲ್ದಾರ್ ನಿಸರ್ಗಪ್ರಿಯ ಉದ್ಘಾಟಿಸಿದರು. ಎನ್.ಬಿ.ಚಂದ್ರಶೇಖರ್, ವಸಂತ ಲಕ್ಷ್ಮೀ, ಡಾ.ಸೋಮಯ್ಯ, ಪಿ.ಪಿ.ಲತಾ ಇತರರು ಇದ್ದಾರೆ    

ಪಿರಿಯಾಪಟ್ಟಣ: ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಆದಿ ಕರ್ಮಯೋಗಿ ಅಭಿಯಾನ ಯೋಜನೆ ತರಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮನ್ವಯತೆಯಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ತಹಶೀಲ್ದಾರ್ ನಿಸರ್ಗಪ್ರಿಯ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಈಚೆಗೆ ಆದಿ ಕರ್ಮಯೋಗಿ ಅಭಿಯಾನ ಯೋಜನೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಧಿಕಾರಿಗಳು ಕ್ರಿಯಾಯೋಜನೆ ಸಿದ್ಧಪಡಿಸಿ ಅ.2 ರಂದು ವಿಶೇಷ ಗ್ರಾಮ ಸಭೆ ನಡೆಸಿ ಅನುಮೋದನೆ ಪಡೆಯಬೇಕು. ನಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ಈ ಅನುದಾನಗಳ ಮೂಲಕ ಸಾರ್ವಜನಿಕ ಉಪಯೋಗಕ್ಕೆ ಅನುಕೂಲಕರವಾದ ಕೆರೆಕಟ್ಟೆಗಳ ಅಭಿವೃದ್ಧಿ, ಶಾಲೆಗಳ ನಿರ್ಮಾಣ, ಆಸ್ಪತ್ರೆ ನಿರ್ಮಾಣ ಸೇರಿ ಇತರೆ ಅಭಿವೃದ್ಧಿ ಯೋಜನೆಗಳಿಗೆ ಬಳಸಬಹುದಾಗಿದೆ ಎಂದರು.

ADVERTISEMENT

ಈ ಯೋಜನೆಗೆ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಚದೇವನಹಳ್ಳಿ, ಮಾಲಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಬಳತಿ ಹಾಗೂ ದೊಡ್ಡಬೇಲಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಗ್ರಾಮಗಳು ಆಯ್ಕೆಯಾಗಿವೆ ಎಂದು ಮಾಹಿತಿ ನೀಡಿದರು.

ಈ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಆಯಾ ಭಾಗದ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆದಿ ಕರ್ಮಯೋಗಿ ಕಾರ್ಯಕರ್ತೆಯರು ಹಾಗೂ ಆದಿ ಸಹಯೋಗಿ ಕಾರ್ಯಕರ್ತೆಯರು ಶ್ರಮಿವಹಿಸಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಬಿ.ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ವಸಂತ ಲಕ್ಷ್ಮೀ, ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಲತಾ, ಪಶುಪಾಲನ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಮೇಲ್ವಿಚಾರಕ ಬಿ.ಟಿ.ಮಹದೇವ್ ಮತ್ತು ವಿವಿಧ ಗ್ರಾ.ಪಂ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.