ADVERTISEMENT

ಅಹೋರಾತ್ರಿ ಹೋರಾಟಕ್ಕೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 3:47 IST
Last Updated 21 ಅಕ್ಟೋಬರ್ 2020, 3:47 IST

ಮೈಸೂರು: ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 7.5ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ, ಪ್ರಸನ್ನಾನಂದ ಸ್ವಾಮೀಜಿ ಅ.21ರಿಂದ 31ರವರೆಗೆಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಅಹೋರಾತ್ರಿ ಪ್ರತಿಭಟನೆಗೆ ನಾಯಕ ಜನಾಂಗ ಬೆಂಬಲ ನೀಡಬೇಕು ಎಂದು ನಾಯಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ದ್ಯಾವಪ್ಪ ನಾಯಕ ಮನವಿ ಮಾಡಿದರು.

ಸ್ವಾಮೀಜಿಯ ಧರಣಿಗೆ ಸಮುದಾಯ ಬೆಂಬಲ ಘೋಷಿಸಬೇಕು ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೋರಿದರು.

ಮೈಸೂರು ನಗರದಲ್ಲಿ ನಾಯಕ ಸಮುದಾಯದ ಜನಸಂಖ್ಯೆ ಹೆಚ್ಚಿದೆ. ಏಳು ವರ್ಷಗಳಿಂದ ವಾಲ್ಮೀಕಿ ಮಹರ್ಷಿಯ ಪ್ರತಿಮೆ ನಿರ್ಮಾಣಕ್ಕೆ ಒತ್ತಾಯ ಮಾಡಿದ್ದರೂ, ಪಾಲಿಕೆ ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿವೆ. ಮುಂದೆಯೂ ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ಪ್ರಭಾಕರ್ ಹುಣಸೂರು, ಶ್ರೀಧರ್ ಚಾಮುಂಡಿಬೆಟ್ಟ, ರಾಘವೇಂದ್ರ, ರಾಜು ಮಾರ್ಕೆಟ್, ಚನ್ನನಾಯಕ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.