ADVERTISEMENT

ನಂಜನಗೂಡು | ‘₹1.10ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ’

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 9:36 IST
Last Updated 18 ಅಕ್ಟೋಬರ್ 2025, 9:36 IST
ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಒಸಾಟ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ₹1.10 ಕೋಟಿ  ವೆಚ್ಚದ ಕೆ.ಪಿ.ಎಸ್.ಇ ಶಾಲೆಯ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿ ಪೂಜೆ ನೆರವೇರಿಸಿದರು
ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಒಸಾಟ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ₹1.10 ಕೋಟಿ  ವೆಚ್ಚದ ಕೆ.ಪಿ.ಎಸ್.ಇ ಶಾಲೆಯ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿ ಪೂಜೆ ನೆರವೇರಿಸಿದರು   

ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಒಸಾಟ್ ಎಜುಕೇಷನ್ ಚಾರಿಟಬಲ್ ಟ್ರಸ್ಟ್ ಹಾಗೂ ದಾನಿಗಳಿಂದ ಸಂಗ್ರಹಿಸಿದ ₹1.10ಕೋಟಿ ವೆಚ್ಚದ ಕೆ.ಪಿ.ಎಸ್.ಇ ಶಾಲೆಯ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಭೂಮಿ ಪೂಜೆ ನೆರವೇರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಒಸಾಟ್ ಸಂಸ್ಥೆ 20 ವರ್ಷಗಳಿಂದ ಶ್ರಮಿಸುತ್ತಿದೆ, ಸಂಸ್ಥೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ, ಒಸಾಟ್ ಎಜುಕೇಶನ್ ಚಾರಿಟಬಲ್ ಟ್ರಸ್ಟ್ ಸಂಸ್ಥೆಯ ಮೂಲಕ ದಾನಿಗಳಾದ ರಾಜಲಕ್ಷ್ಮಿ ಅವರು ತಮ್ಮ ತಾಯಿಯ ನೆನಪಿಗಾಗಿ ₹1.10 ಕೋಟಿ ವೆಚ್ಚದಲ್ಲಿ ಆರು ಶಾಲಾ ಕೊಟ್ಟಡಿ ಮತ್ತು ಶೌಚಾಲಯವನ್ನು ನಿರ್ಮಿಸಿ ಕೊಡಲಿದ್ದಾರೆ. ಕಟ್ಟಡವನ್ನು ಸಂರಕ್ಷಿಸಿ, ಶಿಕ್ಷಣ ಪಡೆಯುವ ಮೂಲಕ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಟ್ರಸ್ಟ್‌ನ ಬಾಲಕೃಷ್ಣರಾವ್ ಮಾತನಾಡಿ, ‘ಒಸಾಟ್ ಸಂಸ್ಥೆಯು 20 ವರ್ಷಗಳಿಂದ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುತ್ತಾ ಬಂದಿದ್ದು, 10 ರಾಜ್ಯಗಳಲ್ಲಿ ಈಗಾಗಲೇ 126 ಶಾಲೆಗಳನ್ನು ನಿರ್ಮಿಸಿ ಕೊಡಲಾಗಿದೆ. ಕರ್ನಾಟಕದಲ್ಲಿ 80 ಶಾಲೆಗಳನ್ನು ನಿರ್ಮಿಸಿದ್ದು, ಡಿಜಿಟಲ್ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಿ ಶಿಕ್ಷಣಕ್ಕೆ ನೆರವು ನೀಡುತ್ತಿದೆ’ ಎಂದರು.

ADVERTISEMENT

ಕಾರ್ಯಕ್ರಮಲ್ಲಿ ಮುಖಂಡರಾದ ಕಳಲೆ ಕೇಶವಮೂರ್ತಿ, ದೊರೆಸ್ವಾಮಿನಾಯಕ, ಸಿದ್ಧಶೆಟ್ಟಿ, ನಾಗರಾಜು, ಮುದ್ದುಮಾದಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್, ಎಸ್‌ಡಿಎಂಸಿ ಉಪಾಧ್ಯಕ್ಷ ಸಿದ್ದರಾಜು, ದಾನಿಗಳಾದ ರಾಜಲಕ್ಷ್ಮಿ, ಕೌಶಲ್, ಬಿಇಒ ಮಹೇಶ್, ಮುಖ್ಯ ಶಿಕ್ಷಕ ಮಹದೇವ ಪ್ರಸಾದ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.