ADVERTISEMENT

ಮೈಸೂರು: ನಗರದಲ್ಲಿ ಫೆ. 11ರಂದು ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 16:18 IST
Last Updated 10 ಫೆಬ್ರುವರಿ 2022, 16:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ನಗರದಲ್ಲಿ ಫೆ. 11ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಈ ಅವಧಿಯಲ್ಲಿ ಎಲ್ಲ ರೀತಿಯ ಪ್ರತಿಭಟನೆ ಹಾಗೂ ಮೆರವಣಿಗೆಗಳನ್ನು ನಿಷೇಧಿಸಿ ಕಮಿಷನರ್ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

‘ಗೊಮ್ಮಟೇಶ್ವರ ಮೂರ್ತಿ ಕುರಿತು ದಿ ನ್ಯೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಯೂಬ್‌ಖಾನ್‌ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್ ಪ್ರತಿಭಟನಾ ಜಾಥಾಗೆ ಕರೆ ನೀಡಿರುವ ಸಂದೇಶ ವೈರಲ್‌ ಆಗಿರುವುದು ಹಾಗೂ ಹಿಜಾಬ್‌ ಬೆಂಬಲಿಸಿ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂಬ ವದಂತಿ ಆಧರಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.