ADVERTISEMENT

ಸಿದ್ದರಾಮಯ್ಯರನ್ನು ಅಫ್ಗಾನಿಸ್ತಾನಕ್ಕೆ ಕಳುಹಿಸಿಕೊಡಬೇಕು: ವಿ.ಶ್ರೀನಿವಾಸ ಪ್ರಸಾದ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 11:28 IST
Last Updated 23 ಅಕ್ಟೋಬರ್ 2021, 11:28 IST
ವಿ.ಶ್ರೀನಿವಾಸ ಪ್ರಸಾದ್‌
ವಿ.ಶ್ರೀನಿವಾಸ ಪ್ರಸಾದ್‌   

ಮೈಸೂರು: ‘ತಾಲಿಬಾನ್‌ ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅಫ್ಗಾನಿಸ್ತಾನಕ್ಕೆಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದರು.

ನಗರದಲ್ಲಿ ಶನಿವಾರ ನಡೆದ ‘ಮ.ವೆಂಕಟರಾಮು ಅಭಿನಂದನಾ ಸಮಾರಂಭ’ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ವಿರೋಧ ಪಕ್ಷದವರು ಬಹಳ ಉದ್ವೇಗದಿಂದ, ವಿವೇಚನೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡಿದ್ದಾರೆ. ಅವರು ರಾಷ್ಟ್ರಮಟ್ಟದ ರಾಜಕೀಯವನ್ನು ಅರ್ಥ ಮಾಡಿಕೊಂಡು ಮಾತನಾಡುತ್ತಿಲ್ಲ. ಅವರ ಭಾಷಣ ಕೇಳಿದ್ದೀರಾ? ಯಾರಾದರೂ ಸಹಿಸುತ್ತಾರೆಯೇ? ಅದಕ್ಕೆ ಆಡಳಿತ ಪಕ್ಷದವರು ಪ್ರತಿಕ್ರಿಯೆ ನೀಡುವುದು ತಪ್ಪೇ’ ಎಂದು ಪ್ರಶ್ನಿಸಿದರು.

‘ವಿರೋಧ ಪಕ್ಷದ ನಾಯಕ ತನ್ನ ಜವಾಬ್ದಾರಿ ಅರಿತು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಬೇಕು. ಅದನ್ನು ಬಿಟ್ಟು ಈ ದೇಶದ ಪ್ರಧಾನಿ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರವನ್ನು ತಾಲಿಬಾನ್‌ಗೆ ಹೋಲಿಸುತ್ತಿದ್ದಾರೆ. ರಾಷ್ಟ್ರ ಮಟ್ಟದ ಯಾವ ನಾಯಕನೂ ಹೀಗೆ ಮಾತನಾಡುತ್ತಿಲ್ಲ. ಇದು ನನ್ನ ಮನಸ್ಸಿಗೆ ನೋವಾಗಿದೆ’ ಎಂದರು.

ADVERTISEMENT

‘ಸಿಂದಗಿ, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.