ಮೈಸೂರು: ಬಿಜೆಪಿಯ ಕೆ.ಆರ್.ಕ್ಷೇತ್ರದ ವತಿಯಿಂದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 105ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣಾ ಅಭಿಯಾನಕ್ಕೆ ಶಾಸಕ ಎಸ್.ಎ.ರಾಮದಾಸ್ ಶನಿವಾರ ಚಾಲನೆ ನೀಡಿದರು.
ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಕ್ಷೇತ್ರದಲ್ಲಿ 7 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬುಟ್ಟಿ ನೇಯುವವರ ಸಂಘ ಸ್ಥಾಪಿಸಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಗೋವುಗಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಿತು.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಕಾರ್ಯಕ್ರಮಕ್ಕೆ ಗೈರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.