ಮೈಸೂರು: ‘ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೇವಾ ಶುಲ್ಕವನ್ನು ಶೇ 90ರಷ್ಟು ಏರಿಕೆ ಮಾಡಿದ್ದು, ಸರ್ಕಾರವು ಗ್ಯಾರಂಟಿ ಯೋಜನೆಗಾಗಿ ಧಾರ್ಮಿಕ ಆಚರಣೆಯಲ್ಲಿಯೂ ಹಣ ಸಂಗ್ರಹಿಸುತ್ತಿದೆ’ ಎಂದು ಜೆಡಿಎಸ್ ನಗರ ಕಾರ್ಯಾಧ್ಯಕ್ಷ ಎಸ್.ಪ್ರಕಾಶ್ ಪ್ರಿಯಾದರ್ಶನ್ ಆರೋಪಿಸಿದ್ದಾರೆ.
‘ಏಕವಾರ ಅಭಿಷೇಕ ಸೇವಾ ಶುಲ್ಕವನ್ನು ₹300ರಿಂದ ₹550ಕ್ಕೆ ಏರಿಕೆ ಮಾಡಿದ್ದಾರೆ. ಹಿಂದೂ ಸಮಾಜದ ಧಾರ್ಮಿಕ ಆಚರಣೆಗೆ ಧಕ್ಕೆ ತರುತ್ತಿದ್ದಾರೆ. ಸರ್ಕಾರ ಕೂಡಲೇ ಹಿಂದೆ ಇದ್ದ ಸೇವಾದರಗಳನ್ನೇ ಮುಂದುವರಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.