‘ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ದುರುಪಯೋಗಪಡಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆ ಸದಸ್ಯರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟಿಸಿದರು– ಪ್ರಜಾವಾಣಿ ಚಿತ್ರ
ಮೈಸೂರು: ‘ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಹಣ ದುರುಪಯೋಗಪಡಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆ ಸದಸ್ಯರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟಿಸಿದರು.
ಸಂಘಟನೆಯ ಪಡುವಾರಹಳ್ಳಿ ಎಂ.ರಾಮಕೃಷ್ಣ ಮಾತನಾಡಿ, ‘ಈಚೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ನಿಷ್ಠಾವಂತ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಡೆತ್‌ನೋಟ್‌ನಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ₹187 ಕೋಟಿಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ’ ಎಂದು ದೂರಿದರು.
‘ಅಧಿಕಾರಿಗಳ ಮೇಲೆ ಒತ್ತಡ ತಂದು ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಅವನ್ನು ದುರುಪಯೋಗ ಮಾಡಿದರೇ ಎಂಬ ಪ್ರಶ್ನೆ ಮೂಡುತ್ತಿದೆ. ನಿಷ್ಠಾವಂತ ಅಧಿಕಾರಿಗಳನ್ನು ಹೆದರಿಸಿ ಅಕ್ರಮ ನಡೆಸುವಂತೆ ಸಚಿವರು ಒತ್ತಡ ಹಾಕಿದರೆ ಎಂಬ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮವಾಗಬೇಕು. ಈ ಕೂಡಲೇ ಸಮಾಜ ಕಲ್ಯಾಣ ಸಚಿವರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.
ಪದಾಧಿಕಾರಿಗಳಾದ ಪ್ರಭಾಕರ್ ಹುಣಸೂರು, ಶ್ರೀಧರ್ ಚಾಮುಂಡಿಬೆಟ್ಟ, ರಾಜು, ಕೆರೆಹಳ್ಳಿ ಮಾದೇಶ್, ಹಿನಕಲ್ ಚಂದ್ರ, ವಿಜಯ್ ಕುಮಾರ್, ಸುರೇಶ್ ಕುಮಾರ್ ಬೀಡು, ರಮೇಶ್, ಎಚ್.ಆರ್.ಪ್ರಕಾಶ್, ರಂಗಸ್ವಾಮಿ, ಪುಟ್ಟರಾಜು, ರವಿ, ಮಂಜುನಾಥ್, ಮೂರ್ತಿ, ಮಹದೇವು, ನಂದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.