ADVERTISEMENT

9 ಸಾಧಕರು, ಶಕ್ತಿಧಾಮಕ್ಕೆ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 15:57 IST
Last Updated 29 ಸೆಪ್ಟೆಂಬರ್ 2022, 15:57 IST
   

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತ್ಯುತ್ಸವ ಸಮಿತಿ ಹಾಗೂ ಅರಸು ಬಳಗಗಳ ಒಕ್ಕೂಟದ ಸಹಯೋಗದಲ್ಲಿ ಸೆ.30ರಂದು ಸಂಜೆ 4ಕ್ಕೆ ಅರಮನೆ ಆವರಣದಲ್ಲಿ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೇಯರ್‌ ಶಿವಕುಮಾರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್, ವಿಧಾನಸಭೆ ಹಾಗೂ ವಿಧಾನಪರಿಷತ್‌ನ ಸದಸ್ಯರು, ನಿಗಮ–ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಪ್ರಶಸ್ತಿಗೆ ಆಯ್ಕೆ: ಮೈಸೂರಿನ ಎಲ್.ಶಿವಲಿಂಗಪ್ಪ (ವರ್ಣಚಿತ್ರ ಕಲೆ), ರತ್ನಾ ಬಿ.ಶೆಟ್ಟಿ (ವಿಶೇಷ ಮಕ್ಕಳ ಸಬಲೀಕರಣ ಸೇವೆ), ಡಿ.ಮಾದೇಗೌಡ (ಸಮಾಜಸೇವೆ), ಬಿ.ಎಸ್.ಹರೀಶ್ (ಪತ್ರಿಕೋದ್ಯಮ), ಶ್ರೀಧರರಾಜೇ ಅರಸು (ಶಿಕ್ಷಣ), ಮಂಡ್ಯದ ಕೆ.‍ಪಿ.ಅರುಣಾಕುಮಾರಿ (ರೋಗಿಗಳ ಶುಶ್ರೂಷೆ–ಮಮತೆಯ ಮಡಿಲು), ಚಾಮರಾಜನಗರದ ಮಲೆಯೂರು ಗುರುಸ್ವಾಮಿ (ಸಾಹಿತ್ಯ), ಸಿ.ಎಂ.ನರಸಿಂಹಮೂರ್ತಿ (ಜಾನಪದ), ಹಾಸನದ ಜಿ.ಮಹಾಂತಪ್ಪ (ಸಮಾಜಸೇವೆ) ಮತ್ತು ಮೈಸೂರಿನ ‘ಶಕ್ತಿಧಾಮ’ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಸ್ಮರಣಿಕೆ ಹಾಗೂ ಸನ್ಮಾನವನ್ನು ಒಳಗೊಂಡಿದೆ.

ADVERTISEMENT

‘ಇದು ಸರ್ಕಾರ, ಜಿಲ್ಲಾಡಳಿತ ಅಥವಾ ಇಲಾಖೆಯಿಂದ ನೀಡುತ್ತಿರುವ ಪ್ರಶಸ್ತಿಯಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಅವರ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಮೊದಲಾದವರು ಇದ್ದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿಯು ಆಯ್ಕೆ ಮಾಡಿದೆ. ಅದಕ್ಕೆ ಸಚಿವರು ಸಮ್ಮತಿ ಸೂಚಿಸಿದ್ದಾರೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್‌ ‘ಪ್ರಜಾವಾಣಿ’ಗೆ ತಿಳಿಸಿದರು.
ಅರಮನೆ ಆವರಣದಲ್ಲಿ ನಡೆಯಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.