ADVERTISEMENT

ಷಣ್ಮುಗಂ ಸೇರಿ ಮೂವರಿಗೆ ಮೈಸೂರು ವಿ.ವಿ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 16 ಜನವರಿ 2025, 13:30 IST
Last Updated 16 ಜನವರಿ 2025, 13:30 IST
<div class="paragraphs"><p>ಮೈಸೂರು ವಿಶ್ವವಿದ್ಯಾಲಯ&nbsp;</p></div>

ಮೈಸೂರು ವಿಶ್ವವಿದ್ಯಾಲಯ 

   

ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ 105ನೇ ವಾರ್ಷಿಕ ಘಟಿಕೋತ್ಸವವನ್ನು ಜ.18ರಂದು ಬೆಳಿಗ್ಗೆ 11ಕ್ಕೆ ಕ್ರಾಫರ್ಡ್ ಭವನದಲ್ಲಿ ಆಯೋಜಿಸಲಾಗಿದೆ.

‘ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಟಿ‌.ಪಿ. ಸಿಂಗ್ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ‌. ಸುಧಾಕರ್ ಪಾಲ್ಗೊಳ್ಳುವರು’ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಮಾಜಿ ಸಂಸದ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಎ.ಸಿ. ಷಣ್ಮುಗಂ, ಸಾರಿಗೆ ಎಂಜಿನಿಯರ್ ಬಾಬು ಕೆ. ವೀರೇಗೌಡ ಹಾಗೂ ಸಮಿ-ಸಬಿನ್ಸಾ ಗ್ರೂಪ್‌ನ ಗ್ಲೋಬಲ್‌ ಸಿಇಒ ಮತ್ತು ವ್ಯವಸ್ಥಾಪಕ ಟ್ರಸ್ಟಿ ಶಾಹೀನ್ ಮಜೀದ್ ಅವರಿಗೆ ಗೌರವ ಡಾಕ್ಟರೇಟ್ ‍‍‍ಪ್ರದಾನ ಮಾಡಲಾಗುವುದು’ ಎಂದರು.

‘2020ರಲ್ಲಿ ನಡೆದಿದ್ದ 100ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ಗೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿತ್ತು. ಆಗ ಅವರು ಸ್ವೀಕರಿಸಿರಲಿಲ್ಲ. ಈ ಬಾರಿ ಒಪ್ಪಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.