ಮೈಸೂರು: ಕರ್ನಾಟಕ ಸುವರ್ಣ ಮಹೋತ್ಸವದ ಜಾಗೃತಿ ಮೂಡಿಸುವ ‘ಕನ್ನಡ ಸುವರ್ಣ ಸಂಭ್ರಮ ರಥ’ ಕ್ಕೆ ಕೋಟೆ ಆಂಜನೇಯ ದೇವಾಲಯದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದರು. ಡೊಳ್ಳುಕುಣಿತ ಕಲಾವಿದರೊಂದಿಗೆ ತಾಳ ಹಾಕಿ ಸಂಭ್ರಮಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಈ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಮೈಸೂರು, ಬೆಳಗಾವಿ, ಮಂಗಳೂರು ಕಲಬುರಗಿಯಲ್ಲಿ ಅಲ್ಲಿನ ಪ್ರಾದೇಶಿಕ ವೈವಿಧ್ಯತೆಯನ್ನು ತಿಳಿಸುವ ರಥಗಳು ಓಡಾಡಲಿವೆ. ರಥದಲ್ಲಿ ಹಂಪಿಯ ಕಲ್ಲಿನ ರಥದ ಪ್ರತಿಕೃತಿ ನಿರ್ಮಿಸಲಾಗಿದ್ದು, ಮುಂಭಾಗದಲ್ಲಿ ತಾಯಿ ಭುವನೇಶ್ವರಿಯ ಪ್ರತಿಕೃತಿ ಇರಿಸಲಾಗಿದೆ. ಮಧ್ಯೆ ವೀರಗಾಸೆ, ಡೊಳ್ಳು ಕುಣಿತ ಮುಂತಾದ ಕಲೆಗಳನ್ನು ಪರಿಚಯಿಸುವ ಪ್ರತಿಕೃತಿಗಳಿವೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಶಾಸಕರಾದ ಕೆ.ಹರೀಶ್ ಗೌಡ, ರವಿಶಂಕರ್, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.