ADVERTISEMENT

ಎಚ್ಚರ ವಹಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 4:21 IST
Last Updated 12 ಅಕ್ಟೋಬರ್ 2025, 4:21 IST

ಮೈಸೂರು: ‘ನಗರದಲ್ಲಿ ಅಪರಾಧ ಚಟುವಟಿಕೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಶನಿವಾರ ಸಂಜೆ ಆಗಮಿಸಿದ್ದ ಅವರು, ಅಧಿಕಾರಿಗಳ ಸಭೆ ನಡೆಸಿದರು.

ದಸರಾ ವಸ್ತುಪ್ರದರ್ಶನ ಬಳಿ ವ್ಯಕ್ತಿಯ ಕೊಲೆ ಹಾಗೂ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆಗಳ ಬಗ್ಗೆ ಮಾಹಿತಿ ಪಡೆದರು.

ADVERTISEMENT

‘ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಗಸ್ತು ಹೆಚ್ಚಿಸಬೇಕು. ಪೊಲೀಸರು ಮೈಮರೆಯಬಾರದು. ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು’ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ಅಧಿಕಾರಿಗಳು, ಪ್ರಕರಣಗಳ ವಿವರ ನೀಡಿದರು. 

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಕಮಿಷನರ್‌ ಸೀಮಾ ಲಾಟ್ಕರ್, ಡಿಸಿ‍ಪಿ ಸುಂದರ್‌ರಾಜ್‌, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್‌, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್‌ಕುಮಾರ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.