ADVERTISEMENT

ನ. 20, 21ರಂದು ಮೈಸೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 4:11 IST
Last Updated 19 ನವೆಂಬರ್ 2025, 4:11 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ. 20, 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

20ರಂದು ಮಧ್ಯಾಹ್ನ 3.20ಕ್ಕೆ ಮೈಸೂರಿಗೆ ಆಗಮಿಸಲಿದ್ದು, ಇಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. 21ರಂದು ಬೆಳಿಗ್ಗೆ 10.30ಕ್ಕೆ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ಪ್ರಥಮ ವಾರ್ಷಿಕೋತ್ಸವ ಹಾಗೂ ‘ಡಿ. ದೇವರಾಜ ಅರಸು, ಎಲ್‌.ಜಿ. ಹಾವನೂರು’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ರಾಮಕೃಷ್ಣ ಆಶ್ರಮದ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6ಕ್ಕೆ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಪ. ಮಲ್ಲೇಶ್‌ ಅವರ ಪುಸ್ತಕಗಳ ಇಂಗ್ಲಿಷ್ ಅನುವಾದಿತ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ ಬೆಂಗಳೂರಿಗೆ ತೆರಳಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.