ADVERTISEMENT

ಹೈಕಮಾಂಡ್ ಬೆದರಿಸಲು ಸಿದ್ದರಾಮಯ್ಯ ಸಮಾವೇಶ: ವಿಜಯೇಂದ್ರ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 0:08 IST
Last Updated 19 ಜುಲೈ 2025, 0:08 IST
ಬಿ.ವೈ. ವಿಜಯೇಂದ್ರ 
ಬಿ.ವೈ. ವಿಜಯೇಂದ್ರ    

ಪ್ರಜಾವಾಣಿ ವಾರ್ತೆ

ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಡೆಸುತ್ತಿರುವುದು ಸಾಧನಾ ಸಮಾವೇಶವಲ್ಲ, ಹೈಕಮಾಂಡ್‌ಗೆ ಬ್ಲಾಕ್‌ಮೇಲ್‌ ಮಾಡುವ ಸಮಾವೇಶ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಸಮಯವನ್ನೇ ಕೊಡಲಿಲ್ಲ. ಹೀಗಾಗಿ ಸವಾಲು ಹಾಕಲೆಂದು ಸಮಾವೇಶ ಮಾಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ನವೆಂಬರ್‌ನಲ್ಲಿ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುವುದು ನಿಶ್ಚಿತ. ತಂತ್ರ- ಕುತಂತ್ರಗಳಿಗೆ ಅದರದೇ ಆದ ಇತಿಮಿತಿ ಇರುತ್ತದೆ. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕಾದ ಸನ್ನಿವೇಶ ನಿರ್ಮಾಣವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.