ADVERTISEMENT

ಸಿಂಧೂ ಬಿ.ರೂಪೇಶ್‌ ವರ್ಗಾವಣೆ ವಿರುದ್ಧ ಎಸ್‌ಡಿಪಿಐ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 9:02 IST
Last Updated 29 ಜುಲೈ 2020, 9:02 IST
ಅಬ್ದುಲ್‌ ಮಜೀದ್‌
ಅಬ್ದುಲ್‌ ಮಜೀದ್‌   

ಮೈಸೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ವರ್ಗಾವಣೆಗೆ ಸರ್ಕಾರದ ಧಾರ್ಮಿಕ ಅಸಹಿಷ್ಣುತೆಯೇ ಕಾರಣ ಎಂದು ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್‌ ಆರೋಪಿಸಿದರು.

‘ಬಕ್ರೀದ್‌ ಸಂದರ್ಭದಲ್ಲಿ ಜಾನುವಾರು ಸಾಗಾಣಿಕೆದಾರರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮ ಜರುಗಿಸುವಂತೆ ಅವರು ಈಚೆಗಷ್ಟೇ ಆದೇಶ ಹೊರಡಿಸಿದ್ದರು. ಹೀಗಾಗಿಯೇ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ’ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸರ್ಕಾರಕ್ಕೆ ಸೈರಣೆ ಎಂಬುದಿಲ್ಲ. ಮೊದಲು ಟಿಪ್ಪು ಜಯಂತಿಯನ್ನು ರದ್ದು ಮಾಡಿತು. ಈಗ ಶಾಲಾ ಪಠ್ಯದಿಂದ ಟಿಪ್ಪು ಚರಿತ್ರೆಯನ್ನೇ ಕೈಬಿಟ್ಟಿದೆ. ಇದರ ವಿರುದ್ಧ ತೀವ್ರತರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

ADVERTISEMENT

ಟಿಪ್ಪು ಕಟ್ಟಿಸಿದ ಕೆರೆಗಳನ್ನು ನಿರ್ವಹಣೆ ಮಾಡಲಾಗದ ಸರ್ಕಾರ ಟಿಪ್ಪುವಿನ ಹೆಸರಿಗೆ ಮಸಿ ಬಳಿಯುತ್ತಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಇಂತಹ ರಾಜಕೀಯ ಬೇಕಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರನ್ನು ಇಡಲಿಲ್ಲ. ಟಿಪ್ಪು ವಿಚಾರದಲ್ಲಿ ಅವರದ್ದು ಮೊಸಳೆ ಕಣ್ಣೀರು ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.