ADVERTISEMENT

ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 13:19 IST
Last Updated 26 ಜೂನ್ 2025, 13:19 IST
ಸ್ಮಾರ್ಟ್‌ ಮೀಟರ್‌
ಸ್ಮಾರ್ಟ್‌ ಮೀಟರ್‌   

ಮೈಸೂರು: ‘ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ದ ಆದೇಶದಂತೆ ಇಲ್ಲಿನ ಚಾಮಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದ ವ್ಯಾಪ್ತಿಯಲ್ಲಿ ಜುಲೈ 1ರಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ (ಎಚ್‌ಟಿ ಹೊರತುಪಡಿಸಿ) ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

‘ರೀಟೇಲ್ ಔಟ್‌ಲೆಟ್‌ಗಳಲ್ಲಿ ಸೆಸ್ಕ್ ನಿಗದಿಪಡಿಸಿರುವ ದರದಲ್ಲಿ ಸ್ಮಾರ್ಟ್‌ ಮೀಟರ್‌ಗಳನ್ನು ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕು’ ಎಂದು ಸೆಸ್ಕ್ ಸೂಚಿಸಿದೆ.

ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿರುವ ಕುರಿತು ಗ್ರಾಹಕರಿಗೆ ಅರಿವು ಮೂಡಿಸಲು ಜೂನ್ 27ರಂದು ಬೆಳಿಗ್ಗೆ 11.30ಕ್ಕೆ ನಿಗಮದ ಕಚೇರಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಆಸಕ್ತರು ಭಾಗವಹಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.