ADVERTISEMENT

ಹಾವು ಕಚ್ಚಿ ರೈತ ಸಾವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2018, 20:05 IST
Last Updated 1 ಅಕ್ಟೋಬರ್ 2018, 20:05 IST

ಮೈಸೂರು: ತಾಲ್ಲೂಕಿನ ಕಾಳಿಸಿದ್ಧನಹುಂಡಿ ಗ್ರಾಮದ ಸಿದ್ದೇಶ (45) ಎಂಬುವವರು ಹಾವು ಕಡಿತದಿಂದ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರು ಭಾನುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷಕಾರಿ ಹಾವೊಂದು ಕಚ್ಚಿದೆ. ತಕ್ಷಣ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಮೈಸೂರು ದಕ್ಷಿಣ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT