ADVERTISEMENT

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿಲ್ಲ:  ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 8:26 IST
Last Updated 7 ಮಾರ್ಚ್ 2020, 8:26 IST
   

ಮೈಸೂರು: ರಾಜ್ಯದಲ್ಲಿ ಇದುವರೆಗೂ ಕೋವಿಡ್- 19 ಬಾಧಿತವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ವಹಿಸಿದ ಹಿನ್ನೆಲೆಯಲ್ಲಿ ವೈರಸ್ ಹರಡಿಲ್ಲ. ಪ್ರತಿ ಜಿಲ್ಲೆಗಳಲ್ಲಿ ಅಲ್ಲದೇ ತಾಲ್ಲೂಕುಮಟ್ಟದಲ್ಲಿ ರೋಗ ಪತ್ತೆ ಸಮಿತಿ ಮಾಡಲಾಗಿದೆ. ಸೋಂಕು ಪತ್ತೆಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಕ್ತ ಪರೀಕ್ಷೆ ಕೇಂದ್ರಗಳನ್ನು ತೆರಯಲಾಗಿದೆ. ಸೋಂಕಿತ ರೋಗಿಗಳಿಗಾಗಿ ಮುಂಜಾಗ್ರತಾ ಕ್ರಮವಾಗಿ2,500 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದರು.

ಮಾಸ್ಕ್ ದರ ಏರಿಕೆ ಮಾಡಿದರೆ ಕ್ರಮ ಕೈಗೊಳಲಾಗುವುದು. ಅಲ್ಲದೇ ಯಾವುದೇ ಸಂಸ್ಥೆಗಳಲ್ಲಿ ಬಯೋಮೆಟ್ರಿಕ್ ಉಪಯೋಗಿಸದಂತೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ADVERTISEMENT

ಕೇಂದ್ರ ಸರ್ಕಾರದ ಅನುದಾನ ಪಡೆದು ಚಿಕ್ಕಮಗಳೂರು, ಯಾದಗಿರಿ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಹೊಸ ನಾಲ್ಕು ವೈದ್ಯಕೀಯ ಕಾಲೇಜು ತೆರೆಯಲು ಮುಂದಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಈ ಬಾರಿಯ ಬಜೆಟ್ ಎಲ್ಲ ಸಚಿವರಿಗೆ ಸಮಾಧಾನ ಇದೆ. ಅತೃಪ್ತಿಯ ಮಾತೇ ಇಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.