ADVERTISEMENT

ಒಲ್ಲದ ಮನಸ್ಸಿನಿಂದ ಸೋಮಣ್ಣ ಸ್ಪರ್ಧೆ: ಡಾ.ಯತೀಂದ್ರ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2023, 15:56 IST
Last Updated 12 ಏಪ್ರಿಲ್ 2023, 15:56 IST
 ಡಾ.ಯತೀಂದ್ರ ಸಿದ್ದರಾಮಯ್ಯ
ಡಾ.ಯತೀಂದ್ರ ಸಿದ್ದರಾಮಯ್ಯ   

ಮೈಸೂರು: ‘ವಿ.ಸೋಮಣ್ಣ ಹೈಕಮಾಂಡ್ ಒತ್ತಡಕ್ಕೆ ಮಣಿದು ವರುಣದಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ, ಜನರು ನಮ್ಮ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿದ್ದಾರೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ವರುಣಾದಲ್ಲಿ ನಮ್ಮ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ತಲೆಕೆಡಿಸಿಕೊಳ್ಳುವುದಿಲ್ಲ. ಒಲ್ಲದ ಮನಸ್ಸಿನಿಂದ ಸೋಮಣ್ಣ ಇಲ್ಲಿಗೆ ಬಂದಿದ್ದಾರೆ. ಎಲ್ಲರೂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ’ ಎಂದರು.

‘ಈ ಬಾರಿಯೂ ಒಳ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ. ಅನೈತಿಕವಾಗಿ ಸೋಲಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಹೋದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಒಳಒಪ್ಪಂದ ಆಗಿತ್ತು. ಹೀಗಾಗಿ ಈ ಬಾರಿ ನಾವು ಎಚ್ಚರಿಕೆಯಿಂದ ಇದ್ದೇವೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.