ADVERTISEMENT

ಆರೆಂಜ್‌ ಕೌಂಟಿ ರೆಸಾರ್ಟ್‌ನಲ್ಲಿ ಸೋನಿಯಾ ಗಾಂಧಿ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 21:18 IST
Last Updated 3 ಅಕ್ಟೋಬರ್ 2022, 21:18 IST
ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದ ಆರೆಂಜ್‌ ಕೌಂಟಿ ರೆಸಾರ್ಟ್‌ಗೆ ಸೋಮವಾರ ಬಂದ ಸೋನಿಯಾ ಗಾಂಧಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದಾರೆ
ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದ ಆರೆಂಜ್‌ ಕೌಂಟಿ ರೆಸಾರ್ಟ್‌ಗೆ ಸೋಮವಾರ ಬಂದ ಸೋನಿಯಾ ಗಾಂಧಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದಾರೆ   

ಮೈಸೂರು: ‘ಭಾರತ್ ಜೋಡೊ’ ಯಾತ್ರೆಯಲ್ಲಿ ‌ಭಾಗವಹಿಸಲು ಎಐಸಿಸಿ‌ ಅಧ್ಯಕ್ಷೆ‌ ಸೋನಿಯಾ ಗಾಂಧಿ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಶೇಷ ವಿಮಾನದಲ್ಲಿ‌ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಕೊಡಗಿನ ಕೂರ್ಗ್‌ ವೈಲ್ಡರ್‌ನೆಸ್‌ ರೆಸಾರ್ಟ್‌ಗೆ ತೆರಳಬೇಕಿತ್ತು. ಹವಾಮಾನ ವೈಪರೀತ್ಯದಿಂದ ರಸ್ತೆ ಮಾರ್ಗದಲ್ಲಿ ಕಬಿನಿ ಸಮೀಪದ ಆರೆಂಜ್‌ ಕೌಂಟಿ ರೆಸಾರ್ಟ್‌ಗೆ ತೆರಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ‘ಯಾತ್ರೆಗೆ ಪಕ್ಷಭೇದ ಮರೆತು ನಿರೀಕ್ಷೆಗೂ ಮೀರಿ ಜನ ಸ್ಪಂದಿಸಿದ್ದಾರೆ. ದಸರಾ ಹಿನ್ನೆಲೆಯಲ್ಲಿ ಎರಡು ದಿನ ಸೋನಿಯಾಗಾಂದಿ ಅವರು ಇಲ್ಲಿಯೇ ತಂಗಲಿದ್ದು, 6ರಂದು ಯಾತ್ರೆ ಮುಂದುವರಿಯಲಿದೆ’ ಎಂದರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಯಾತ್ರೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ADVERTISEMENT

ವಿಮಾನನಿಲ್ದಾಣದಲ್ಲಿ ಸೋನಿಯಾ ಗಾಂಧಿ ಅವರನ್ನು ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌, ಸಂಸದ ಡಿ.ಕೆ.ಸುರೇಶ್‌, ಮೇಲ್ಮನೆ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.