ADVERTISEMENT

‘ಗುಬ್ಬಚ್ಚಿ ಸಂತತಿ‌ ಉಳಿಯಲಿ’

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 13:09 IST
Last Updated 20 ಮಾರ್ಚ್ 2023, 13:09 IST
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಗುಬ್ಬಚ್ಚಿ ದಿನದ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌ನಿಂದ ಬಟ್ಟಲುಗಳನ್ನು ಸೋಮವಾರ ವಿತರಿಸಲಾಯಿತು
ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಗುಬ್ಬಚ್ಚಿ ದಿನದ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌ನಿಂದ ಬಟ್ಟಲುಗಳನ್ನು ಸೋಮವಾರ ವಿತರಿಸಲಾಯಿತು   

ಮೈಸೂರು: ‘ಗುಬ್ಬಚ್ಚಿ ಸಂತತಿ‌ ಉಳಿಯಬೇಕು’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ಹೇಳಿದರು.

ಇಲ್ಲಿನ ಕೃಷ್ಣಮೂರ್ತಿಪುರಂನಲ್ಲಿರುವ ಗುಬ್ಬಚ್ಚಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಗುಬ್ಬಚ್ಚಿ ದಿನದ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್‌ನಿಂದ ಆಹಾರ, ನೀರಿನ ಬಟ್ಟಲುಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು.

‘ಪರಿಸರ ಉಳಿದರೆ ಮಾತ್ರ ಭೂಮಂಡಲದಲ್ಲಿ ಮನುಷ್ಯರು ಬದುಕಲು ಸಾಧ್ಯ. ಬಿಸಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಸಣ್ಣ ಪುಟ್ಟ ಪ್ರಾಣಿ–ಪಕ್ಷಿಗಳ ಜೀವ ಉಳಿಸಲು ಮನೆಗಳ ತಾರಸಿಯ ಮೇಲೆ ನೀರು–ಧಾನ್ಯ ಇಡಬೇಕು. ಈ ನಿಟ್ಟಿನಲ್ಲಿ ಯುವಜನರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.

ADVERTISEMENT

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರವಿಚಂದ್ರ, ರಾಕೇಶ್, ಸುಚೇಂದ್ರ, ಶಾಲೆಯ ಮುಖ್ಯ ಶಿಕ್ಷಕ ಮೋಹನ್ ಕುಮಾರ್, ಸಹ ಶಿಕ್ಷಕರಾದ ಚಂಪಶ್ರೀ, ದಿವ್ಯಾ, ರೇಖಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.