ಮೈಸೂರು: ‘ಶಾಸಕ ತನ್ವೀರ್‌ಸೇಠ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ಸಂಘಟನೆ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದೇ ಶಾಸಕರ ಮೇಲಿನ ಹಲ್ಲೆಗೆ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ. ಇನ್ನು, ಗೃಹ ಸಚಿವರು ಸಂಘಟನೆಯ ಹೆಸರನ್ನೇ ಹೇಳುತ್ತಾರೆ. ಹೀಗಾದರೆ, ತನಿಖೆಗೆ ಹಿನ್ನಡೆಯಾಗುವುದಿಲ್ಲವೇ?’ ಎಂದು ಕೇಳಿದರು.
ಮೊದಲು ನಿಷ್ಪಪಕ್ಷಪಾತ ತನಿಖೆ ನಡೆಯಲಿ. ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಸಂಘಟನೆಯ ಹೆಸರನ್ನು ತರಬಾರದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.