ಪಿರಿಯಾಪಟ್ಟಣ: ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಆರಾಧನೆ ಸಾಂಪ್ರದಾಯಿಕವಾಗಿ, ಸಡಗರದಿಂದ ನಡೆಯಿತು.
ಗ್ರಾಮದ ದೊಡ್ಡಕೆರೆ ಆವರಣದಲ್ಲಿರುವ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಪುರೋಹಿತರಾದ ಲೋಕೇಶ್ ಆರಾದ್ಯ, ಅವಿನಾಶ್ ಆರಾದ್ಯ, ಶ್ರೀಕಂಠಾರಾದ್ಯ, ಮಂಜುನಾಥ್, ಪುಟ್ಟ ಸೋಮರಾದ್ಯ ನೇತೃತ್ವದಲ್ಲಿ ದೇವಾಲಯದಲ್ಲಿ ಹಲವು ಬಗೆಯ ಧಾರ್ಮಿಕ ಕೈಂಕರ್ಯ ನಡೆಯಿತು. ನಂತರ ಮಲೆಮಹದೇಶ್ವರ ಸ್ವಾಮಿ ವಿಗ್ರಹವನ್ನು ಬಗೆ ಬಗೆಯ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ನೆರವೇರಿಸಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಿ ಅನ್ನ ಸಂತರ್ಪಣೆ ನಡೆಸಲಾಯಿತು.
ಅನ್ನ ಸಂತರ್ಪಣೆಗೆ ಗ್ರಾಮದ ಮನೆ ಮನೆಗೆ ತೆರಳಿ ಧವಸಧಾನ್ಯ, ತರಕಾರಿ ಸೇರಿದಂತೆ ಅಡುಗೆ ಪದಾರ್ಥ ಸಂಗ್ರಹಿಸಿ ದೇವಾಲಯ ಆವರಣದಲ್ಲಿ ಅಡುಗೆ ತಯಾರಿಸಿ ಅನ್ನ ಸಂತರ್ಪಣೆ ನೆರವೇರಿಸಿದ್ದು ವಿಶೇಷವಾಗಿತ್ತು. ಹರಳಹಳ್ಳಿ ರಾವಂದೂರು ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.